ದಿನಾಂಕ:13/11/2024 ರಂದು ಸಂಜೆ 05:00 ಗಂಟೆಯ ಸಮಯದಲ್ಲಿ ಅರಸೀಕೆರೆ ತಾಲ್ಲೂಕು, ಗಂಡಸಿ ಹೋಬಳಿ, ಭಾಗೇಶ್ಪರ ಗ್ರಾಮದ ವಾಸಿ ಶ್ರೀ ವೆಂಕಟೇಶ ಬಿನ್ ತಿಮ್ಮಯ್ಯ 42 ವರ್ಷ, ರವರು ತಮ್ಮ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ತಮ್ಮ ಇಸ್ತಿçà ಅಂಗಡಿಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯವನ್ನು ಕುಡಿಯಲು ಅನುವು ಮಾಡಿಕೊಟ್ಟಿರುತ್ತಾರೆಂದು ಶ್ರೀಮತಿ ಆರತಿ ಟಿ, ಪಿಎಸ್‌ಐ ಗಂಡಸಿ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ವೆಂಕಟೇಶ್ ಬಿನ್ ತಿಮ್ಮಯ್ಯ, 42 ವರ್ಷ, ಎಂದು ತಿಳಿದಿದ್ದು, ಆತನನ್ನು ದಸ್ತಗಿರಿ ಮಾಡಿ 90 ಎಂಎಲ್ ನ 07 ಓರಿಜಿನಲ್ ಚಾಯ್ಸ್ ವಿಸ್ಕಿಯ ಟೆಟ್ರಾ ಪ್ಯಾಕೇಟ್ ಗಳನ್ನು ಅಮಾನತ್ತು ಪಡಿಸಿಕೊಂಡು ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.



0 Comments