ಮೈಸೂರು: ಮನೆ/ಪಂಪ್‌ಸೆಟ್‌ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುವುದು ಮತ್ತು ಅದರಿಂದ ಉಂಟಾಗುವ ಅನಾಹುತಗಳ ಕುರಿತು ರೈತರು, ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸಲು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಜಾಗೃತ ದಳದ ವತಿಯಿಂದ ವಿವಿಧೆಡೆ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಪ್ರಮುಖವಾಗಿ ಗ್ರಾಮೀಣ ಪ್ರದೇಶದ ರೈತರು ಹಾಗೂ ಕಾಡಂಚಿನ ಪ್ರದೇಶಗಳಲ್ಲಿರುವ ಜನರು ತಮ್ಮ ಜಮೀನುಗಳಿಗೆ ಅಳವಡಿಸಿರುವ ತಂತಿ ಬೇಲಿಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದಾರೆ. ಇದರ ಪರಿಣಾಮ ಬಹುತೇಕ ಸಂದರ್ಭಗಳಲ್ಲಿ ಮನುಷ್ಯರು ಹಾಗೂ ಕಾಡು ಪ್ರಾಣಿಗಳ ಜೀವಕ್ಕೆ ಹಾನಿ ಉಂಟಾಗುತ್ತದೆ. ಈ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಲವು ಪ್ರಕರಣಗಳನ್ನು ದಾಖಲು ಮಾಡಿರುತ್ತಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ರೈತರು ತಮ್ಮ ಜಮೀನುಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿರುವುದು ಕಂಡುಬಂದಲ್ಲಿ ಹಾಗೂ ಅದರಿಂದ ಮನಷ್ಯ ಅಥವಾ ವನ್ಯಜೀವಿಗಳು ಮೃತಪಟ್ಟಲ್ಲಿ ಸಂಬಂಧಪಟ್ಟವರನ್ನು ನೇರ ಹೊಣೆಗಾರರನ್ನಾಗಿ ಮಾಡಿ, ವಿದ್ಯುತ್ ಕಾಯ್ದೆ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಕಾನೂನು ಕ್ರಮಕೈಗೊಳ್ಳುವುದಾಗಿ ಹೇಳಿದ ಸೆಸ್ಕ್ ಅಧಿಕಾರಿಗಳು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಅಕ್ರಮ ವಿದ್ಯುತ್ ಸಂಪರ್ಕ ಪಡೆದಿರುವ ಕುರಿತಂತೆ ಸೆಸ್ಕ್ ಜಾಗೃತ ದಳದ ಅಧಿಕಾರಿಗಳು ನಿರಂತರವಾಗಿ ಗಸ್ತು ನಡೆಸುತ್ತಿರುತ್ತಾರೆ. ಈ ಸಂದರ್ಭದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಲ್ಲಿ ಕಾನೂನು ಕ್ರಮಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಲ್ಲಿ ಈ ಕೆಳಕಂಡ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಅಧಿಕಾರಿಗಳು ತಿಳಿಸಿದರು.
:ಸೆಸ್ಕ್ ಜಾಗೃತ ದಳ:
ಮೈಸೂರು ಜಿಲ್ಲೆ: ಪೊಲೀಸ್ ಇನ್ಸ್‌ಪೆಕ್ಟರ್ 9448994736 ; ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) – 9448994737.
ಮಂಡ್ಯ ಜಿಲ್ಲೆ: ಪೊಲೀಸ್ ಇನ್ಸ್‌ಪೆಕ್ಟರ್ 9448994919; ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) 9448994863.
ಹಾಸನ ಜಿಲ್ಲೆ: ಪೊಲೀಸ್ ಇನ್ಸ್‌ಪೆಕ್ಟರ್ 9448994935; ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) 9448994936
ಚಾಮರಾಜನಗರ ಜಿಲ್ಲೆ: ಪೊಲೀಸ್ ಇನ್ಸ್‌ಪೆಕ್ಟರ್ 9449598689; ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) 9448994926
ಕೊಡಗು ಜಿಲ್ಲೆ: ಪೊಲೀಸ್ ಇನ್ಸ್‌ಪೆಕ್ಟರ್ 9449598620; ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) 9448499902



0 Comments