ತಿಮ್ಮೇಗೌಡ ಕದಾಳು ಗ್ರಾ.ಪಂ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

 ಆಲೂರು : ತಾಲ್ಲೂಕಿನ ಕದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುಧುವಾರ ನಡೆದ ಚುನಾವಣೆಯಲ್ಲಿ ತುರುಗನಹಳ್ಳಿ ಗ್ರಾಮದ ಸದಸ್ಯ ತಿಮೇಗೌಡ (ಕಾಂತರಾಜು)ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದೆ ಅಧ್ಯಕ್ಷರಾಗಿದ್ದ ಶಾಂತಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಿಮ್ಮಗೌಡ ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ್ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಎಂದು ಪ್ರಕಟಿಸಿ ತಿಮೇಗೌಡ ಅವರಿಗೆ ಅಧಿಕಾರ ವಹಿಸಿಕೊಟ್ಟರು.


ನೂತನ ಅಧ್ಯಕ್ಷ ತಿಮೇಗೌಡ, ಮಾತನಾಡಿ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭೀವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಚುನಾವಣಾಧಿಕಾರಿ ಶ್ರೀನಿವಾಸ್ ಮಾತನಾಡಿ, ಸದಸ್ಯರು ಮತ್ತು ಅಧ್ಯಕ್ಷರು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಬಹುದು. ಅಭಿವೃದ್ಧಿ ವಿಚಾರಗಳಿಗೆ ರಾಜಕೀಯವನ್ನು ಬೆರೆಸಬಾರದು ಎಂದು ಸಲಹೆ ನೀಡಿದರು.

ಈ ವೇಳೆ ಮಾಜಿ ಅಧ್ಯಕ್ಷ ಶಾಂತಪ್ಪ, ಉಪಾಧ್ಯಕ್ಷ ಶ್ವೇತಾ ಎನ್ ಸೇರಿದಂತೆ 13 ಮಂದಿ ಸದಸ್ಯರು, ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕೆ. ಎಸ್. ಮಂಜೇಗೌಡ, ಹಾಸನ ಜಿಲ್ಲಾ ಹೆಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್,ಬಿಜೆಪಿ ಹಿರಿಯ ಮುಖಂಡ ಕದಾಳು ಲೋಕೇಶ್, ರಾಜಪ್ಪಗೌಡ, ಸೇರಿದಂತೆ ಹಲವು ಗಣ್ಯರು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್, ಕಾರ್ಯದರ್ಶಿ ದಿಲೀಪ್ ಕುಮಾರ್ ಹಾಗೂ ಕಂದಾಯ ನಿರೀಕ್ಷಕ ಕೃಷ್ಣಪ್ಪ, ಬೈರಾಪುರ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸುಬ್ರಮಣಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Post a Comment

0 Comments