ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಸನ: ರಾಷ್ಟ್ರೀಯ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪೂರ್ಣಾವಧಿ Legal Aid Defense Counsel System (ಕಾನೂನು ನೆರವು ಪ್ರತಿವಾದಿ ವಕೀಲರ ವ್ಯವಸ್ಥೆ) ಕಚೇರಿಯನ್ನು ಸ್ಥಾಪಿಸಲಾಗಿದ್ದು, ಸದರಿ ವ್ಯವಸ್ಥೆಯಲ್ಲಿ ಒಪ್ಪಂದದ ಮೇರೆಗೆ ಕೆಲಸ ನಿರ್ವಹಿಸಲು Chief Legal Aid Defense Counsel - 01 , Deputy Chief Legal Aid Defense Counsel - 01 , Assistant Legal Aid Defense Counsel – 01 ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಆಸಕ್ತ ಅರ್ಹ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ(ಕಚೇರಿ ಅವಧಿಯಲ್ಲಿ) ಭರ್ತಿ ಮಾಡಿದ ಅರ್ಜಿಗಳನ್ನು ಜ.10 ರೊಳಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಗೆ ಸಲ್ಲಿಸಬಹುದಾಗಿರುತ್ತದೆ.

 ಹೆಚ್ಚಿನ ಮಾಹಿತಿಗಾಗಿ ಹಾಸನದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Post a Comment

0 Comments