ಜ.5 ರಂದು 4ನೇ ಓಪನ್ ರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಮೊಹಮ್ಮದ್ ಆರೀಫ್

ಹಾಸನ: ನಗರದ ಅಂಬೇಡ್ಕರ್ ಭವನದಲ್ಲಿ ಜನವರಿ ೫ರ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಓಪನ್ ೪ನೇ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಹಾಸನ ಜಿಲ್ಲಾ ಕರಾಟೆ ಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಆರೀಫ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ನಮ್ಮ ಸಂಸ್ಥೆಯು ಈಗಾಗಲೇ ಹಲವು ಕರಾಟೆ ಪಂದ್ಯವಳಿಗಳನ್ನು ಹಾಸನದಲ್ಲಿ ಯಶಸ್ವಿಯಾಗಿ ಆಯೋಜಿಸಿದ್ದು, ಪ್ರಸ್ತುತ ಜನವರಿ 5ರಂದು ಅಂಬೇಡ್ಕರ್ ಭವನದಲ್ಲಿ ಹಾಸನ ಓಪನ್ 4ನೇ ರಾಷ್ಟ್ರೀಯ ಪಂದ್ಯಾವಳಿಯನ್ನು ಆಯೋಜಿಸಿದೆ.

ಈ ಪಂದ್ಯಾವಳಿಗೆ ಕರ್ನಾಟಕ, ಶಿವಮೊಗ್ಗ, ಬೆಂಗಳೂರು, ಮೈಸೂರು, ಬಳ್ಳಾರಿ ಹಾಗೂ ಹೊರ ರಾಜ್ಯದಿಂದ ಕೇರಳ, ತಮಿಳುನಾಡು ಸೇರಿದಂತೆ ಕರ್ನಾಟಕದ 12 ಜಿಲ್ಲೆಗಳಿಂದ ಸುಮರು 450 ಕ್ರೀಡಾಪಟುಗಳು ಆಗಮಿಸುತ್ತಿದ್ದು, ಕ್ರೀಡಾಕೂಟದಲ್ಲಿ 5 ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಿತಿ ರವರು ಭಾಗವಹಿಸುತ್ತಿದ್ದಾರೆ ಎಂದರು.

ಪಂದ್ಯಾವಳಿಯ ಉದ್ಘಾಟನೆಯನ್ನು ಜನವರಿ 5ರ ಬೆಳ್ಳಿಗ್ಗೆ 11 ಗಂಟೆಗೆ ಸಂಸದರಾದ ಶಾಸಕರಾದ ಹೆಚ್.ಎಸ್. ಸ್ವರೂಪ್ ಪ್ರಕಾಶ್ ಹಾಗೂ ಸಂಸದರಾದ ಶ್ರೇಯಸ್ ಎಂ. ಪಟೇಲ್ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯ ರಾಜ್ಯಧ್ಯಕ್ಷರಾದ ರೆನ್‌ಶಿ ಶಿವಮೊಗ್ಗ ವಿನೋದ್ ವಹಿಸಲಿದ್ದು, ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಹಾಸನ ಜಿಲ್ಲಾ ಕರಾಟೆ ಸಂಸ್ಥೆಯ ಅಧ್ಯಕ್ಷರಾದ ನಾನು ವಹಿಸುವುದಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹಾಸನ ಜಿಲ್ಲಾ ಕರಾಟೆ ಸಂಸ್ಥೆಯ ಸುಸೈನ್, ಸರ್ಪಾಸ್, ಶೇಹನ್, ಶಮಂತ್ ಇತರರು ಉಪಸ್ಥಿತರಿದ್ದರು.

Post a Comment

0 Comments