ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟ

ಹಾಸನ: ಭಾರತದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಬಂಧಿಸುವಂತೆ ಆಗ್ರಹಿಸಿ ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟವನ್ನು ಜ.೮ರ ಬುಧವಾರದಂದು ಹೋರಾಟ ನಡೆಸುವುದಾಗಿ ದಲಿತ ಜನಪರ ಚಳುವಳಿಗಳ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಳ್ಳವಾಗಿದೆ ಎಂದು ನಗರದ ಸುದ್ದಿಗೋಷ್ಠಿಯಲ್ಲಿ ಸಂದೇಶ್ ಮತ್ತು ಪರಮೇಶ್ ಅವರು ತಿಳಿಸಿದರು.

ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಡಿರುವ ಅಪಮಾನಕರ ಮಾತುಗಳು ಅತ್ಯಂತ ಖಂಡನೀಯವಾದುದು. ಈ ಮಾತುಗಳು ಅಮಿತ್ ಶಾ ಅವರ ಮನುವಾದಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಹಾಗೂ ಅವರು ಹಿಂದೆಯೂ ಈಗಲೂ ಮುಂದೆಯೂ ಬಾಬಾಸಾಹೇಬರನ್ನು ಒಪ್ಪಿಕೊಳ್ಳುವುದಿಲ್ಲ ಎನ್ನುವುದು ಸಾಬೀತಾಗುತ್ತದೆ ಎಂದರು.

ಮನುವಾದಿ ಮನಸ್ಥಿತಿಯ ಅಮಿತ್ ಶಾ ಭಾರತದ ಗೃಹ ಸಚಿವರಾಗಿ ಮುಂದುವರಿದರೆ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಅವರ ಆಶಯಗಳಿಗೆ ವಿರುದ್ಧವಾಗುತ್ತದೆ ಮತ್ತು ಸಂವಿಧಾನದ ಮೂಲ ತತ್ವಗಳಿಗೆ ದಕ್ಕೆಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಹಿನ್ನಲೆಯಲ್ಲಿ ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ, ಮನುವಾದಿ ಅಮಿತ್ ಶಾ ಅವರನ್ನು ಕೂಡಲೇ ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಯನ್ನು ಅವಮಾನಿಸಿದ ಅವರ ಮೇಲೆ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕೆಂದು ಆಗ್ರಹಿಸಿ ಹಾಸನ ಜಿಲ್ಲಾ ದಲಿತ ಜನಪರ ಚಳುವಳಿಗಳ ಒಕ್ಕೂಟದ ನೇತೃತ್ವದಲ್ಲಿ ಜನವರಿ ೮ರಂದು ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮಶೇಖರ್, ರಾಜಶೇಖರ್, ಮಲ್ಲೇಶ್, ಸಂದೇಶ್, ದರಮೇಶ್ ಮತ್ತು ಸಮಿರ್ ಉಪಸ್ಥಿತರಿದರು.

Post a Comment

0 Comments