ಹೊರಗುತ್ತಿಗೆ ನೌಕರರ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸರ್ಕಾರದ ಆದೇಶ ಪಡೆಯಲು ಡಿಸಿ ಸೂಚನೆ

ಹಾಸನ: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಇಲ್ಲದಿರುವ ಕಾರಣ ಮೊದಲಿಗೆ ಸರ್ಕಾರದ ಆದೇಶ ಪಡೆಯುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹೊರಗುತ್ತಿಗೆ ನೌಕರರ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು ಸ್ಥಾಪನೆ ಸಂಬಂಧ ಸರ್ಕಾರದಿಂದ ಯಾವುದೇ ಆದೇಶವಾಗಿಲ್ಲ. ಆದ್ದರಿಂದ ಸರ್ಕಾರಕ್ಕೆ ಪತ್ರ ಬರೆಯಲು ತಿಳಿಸಿದರು. ಸಹಕಾರ ಸಂಘ ರಚನೆ ಕುರಿತು ಜಿಲ್ಲೆಯಲ್ಲಿರುವ ಹೊರಗುತ್ತಿಗೆ ನೌಕರರ ಅಭಿಪ್ರಾಯಗಳನ್ನು ಸಂಗ್ರಹಿಸಿ. ಹಾಗೆಯೇ ಹೊರಗುತ್ತಿಗೆ ಟೆಂಡರ್‌ಗೆ ಸಂಬಂಧಿಸಿದಂತೆ 4 ಜಿ, 4 ಎಚ್ ರಿಯಾಯಿತಿ ಸಂಬಂಧಿಸಿದಂತೆ ಅನುಮತಿ ಪಡೆಯಲು ಸರ್ಕಾರಕ್ಕೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಐಎಫ್‌ಎಸ್ ಅಧಿಕಾರಿ ಆಕರ್ಷ್, ಕಾರ್ಮಿಕ ಅಧಿಕಾರಿ ಯಮುನಾ ಹಾಗೂ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Post a Comment

0 Comments