ಹಾಸನದ ಹಿರಿಯ ಮುದ್ರಣಕಾರ ಕೆ.ಆರ್.ಚಂದ್ರಪ್ಪನವರಿಗೆ ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ

 


ಹಾಸನ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.), ಬೆಂಗಳೂರು ಸಂಸ್ಥೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಹಮ್ಮಿಕೊಂಡಿದ್ದ ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ನಗರದ ಶ್ರೀ ರಾಘವೇಂದ್ರ ಪ್ರಿಂಟರ್ಸ್ ಮಾಲೀಕರಾದ ಶ್ರೀ ಕೆ ಆರ್‌ ಚಂದ್ರಪ್ಪ ,ನಿರ್ದೇಶಕರು, ಕೆ.ಎಸ್.ಪಿ.ಎ. ಹಾಗೂ ಹಾಸನ, ತುಮಕೂರು, ಚಿಕ್ಕ್ಕಬಳಾಪುರ, ಚಿಕ್ಕಮಗಳೂರು ಜಿಲ್ಲೆಗಳ ರಾಜ್ಯ ವಲಯ ಸಂಚಾಲಕರು, ಕರ್ನಾಟಕ ರಾಜ್ಯ ಮುದ್ರಣಕಾರರ ಸಮನ್ವಯ ಸಮಿತಿ, ಬೆಂಗಳೂರು ಹಾಗೂ ಮಾಜಿ ಅಧ್ಯಕ್ಷರು, ಹಾಸನ ಜಿಲ್ಲಾ ಮುದ್ರಣಕಾರರ ಸಂಘ (ರಿ.) ರವರಿಗೆ ಕಳೆದ ನಾಲ್ಕೈದು ದಶಕಗಳ ಮುದ್ರಣ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ೨೦೨೪ ನೇ ಸಾಲಿನ ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಲಬುರ್ಗಿ ಜಿಲ್ಲೆಯ ಆಳಂದ ತೋಂಟದಾರ್ಯ ಮಠದ ಶ್ರೀ ಕೋರಣೇಶ್ವರ ಸ್ವಾಮಿ, ಸಮ್ಮೇಳನ ಸರ್ವಾಧ್ಯಕ್ಷ ರಂಜಾನ್ ದರ್ಗಾ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್, ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್, ಕುಣಿಗಲ್ ಕ್ಷೇತ್ರದ ಶಾಸಕ ಡಾ. ರಂಗನಾಥ್, ರಾಜ್ಯ ಉಪಾಧ್ಯಕ್ಷ ಟಿ. ಸತೀಶ್ ಜವರೇಗೌಡ, ಹಿರಿಯ ಸಾಹಿತಿ ಡಾ. ಬಿ. ಸಿ. ಶೈಲಾ ನಾಗರಾಜ್, ಪ್ರಸಿದ್ಧ ಚಲನಚಿತ್ರ ನಟ ಡಾ. ಚಿಕ್ಕ ಹೆಜ್ಜಾಜಿ ಮಹಾದೇವ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Post a Comment

0 Comments