ಬೇಲೂರು: ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆ ಕಾರ್ಮಿಕರ ಮೇಲೆ ದಾಳಿ ನಡೆಸಿ ಕಾರ್ಮಿಕರಿಗೆ ಗಾಯಗಳಾಗಿವೆ.
ಸೋಮವಾರ ಬೆಳಿಗ್ಗೆ ಬಿಕ್ಕೋಡು ಕಾಫಿ ಎಸ್ಟೇಟ್‌ಗೆ ಕೆಲಸಕ್ಕೆ ತೆರಳುತ್ತಿದ್ದ ಗೀತಾ (40), ಹೇಮಾ (38) ಅವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಗೀತಾ ಅವರ ಹೊಟ್ಟೆ ಮತ್ತು ತಲೆ ಭಾಗ ಹಾಗೂ ಹೇಮಾ ಅವರ ಮುಖ, ಬಲಕೈಗೆ ಗಾಯಗಳಾಗಿವೆ.
ಗಾಯಾಳುಗಳಿಗೆ ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.



0 Comments