ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್‌ ಪಲ್ಟಿ: ಓರ್ವ ಸಾ..ವು

 ಬೇಲೂರು : ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಜೀಪ್ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಕಾರ್ಮಿಕ ಸಾ…ವನ್ನಪ್ಪಿ, ಮೂವರು ಚಿಕ್ಕ ಮಕ್ಕಳು ಸೇರಿ ಏಳು ಮಂದಿಗೆ ಗಾಯಗಳಾಗಿರುವ ಘಟನೆ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡದಿದೆ ಆಲಿ (29) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಬೇಲೂರು ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.


ಯೋಗೇಶ್‌ಗೌಡ ಎಂಬುವವರ ತೋಟದಲ್ಲಿ ಕೆಲಸ ಮುಗಿಸಿ ಹಳೇಯ ಜೀಪ್‌ನಲ್ಲಿ ಮನೆಗೆ ತೆರಳುತ್ತಿದ್ದ ಬಡ ಕೂಲಿ ಕಾರ್ಮಿಕರು, ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಯ ತಪ್ಪಿ ರಸ್ತೆ ಬದಿಗೆ ಬಿಟ್ಟಿದ್ದು, ಆಯಾತಪ್ಪಿದ ಜೀಪ್‌ ಪಲ್ಟಿಯಾಗಿದೆ.

ಇದರ ಪರಿಣಾಮವಾಗಿ ಓರ್ವ ಮರಣಹೊಂದಿದ್ದಾನೆ. ಎಲ್ಲರೂ ಅಸ್ಸಾಂ ಮೂಲದ ಕಾರ್ಮಿಕರಾಗಿದ್ದು, ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಅರೇಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.



Post a Comment

0 Comments