Khel Ratna Award: ಮನುಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ

 ಎರಡು ಒಲಿಂಪಿಕ್ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದ ಶೂಟರ್ ಮನುಭಾಕರ್, ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಕಿರಿಯ ಕ್ರೀಡಾಪಟು ಡಿ ಗುಕೇಶ್ ಸೇರಿದಂತೆ ನಾಲ್ವರು ಸಾಧಕರಿಗೆ ಈ ಬಾರಿ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಒಲಿದು ಬಂದಿದೆ. ಗುರುವಾರ ಕೇಂದ್ರ ಕ್ರೀಡಾ ಸಚಿವಾಲಯ ಖೇಲ್ ರತ್ನ ಪ್ರಶಸ್ತಿ ಗೌರವ ಪಡೆಯುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.


ಭಾರತ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಪ್ರವೀಣ್ ಕುಮಾರ್ ಕೂಡ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆಯಲಿದ್ದಾರೆ. ಖೇಲ್ ರತ್ನ ಭಾರತದ ಸಾಧಕ ಕ್ರೀಡಾಪಟುಗಳಿಗೆ ನೀಡುವ ಅತ್ಯುನ್ನತ ಗೌರವವಾಗಿದೆ. 17 ಪ್ಯಾರಾ ಅಥ್ಲೀಟ್‌ಗಳು ಸೇರಿದಂತೆ 32 ಕ್ರೀಡಾಪಟುಗಳನ್ನು ಅರ್ಜುನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Post a Comment

0 Comments