ಹಾಸನ : ಗೂಡ್ಸ್ ಲಾರಿಗಳಿಗೆ ತಗುಲಿದ ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಸುಟ್ಟು ಕರಕಲಾದ ಎರಡು ಗೂಡ್ಸ್ ಲಾರಿಗಳು.
ತಹಸೀಲ್ದಾರ್ ಕಚೇರಿ ಹಿಂಭಾಗವಿರುವ ಖಾಸಗಿ ಶಾಲೆ ಆವರಣದಲ್ಲಿ ನಿಲ್ಲಿಸಿದ್ದ ಗೂಡ್ಸ್ ಲಾರಿಗಳು. ಹಾಸನ ಜಿಲ್ಲೆ, ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದ ಘಟನೆಯಾಗಿದೆ.
ಆಕಸ್ಮಿಕ ಬೆಂಕಿ ತಗುಲಿ ಎರಡು ಸುಟ್ಟು ಹೋಗಿರುವ ಎರಡು ಗೂಡ್ಸ್ ಲಾರಿಗಳು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಅಷ್ಟರಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿದ್ದ ಗೂಡ್ಸ್ ಲಾರಿಗಳು.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



0 Comments