ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯ ಟಿಬೆಟಿಯನ್ ಕ್ಯಾಂಪ್‌ನಲ್ಲಿ ಧರ್ಮಗುರು ದಲೈ ಲಾಮಾ ಅವರನ್ನು ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ ಮಾಡುತ್ತಿರುವ ಅವರ ಕಾರ್ಯಗಳು ಮತ್ತು ಅವರ ವಿಚಾರಗಳ ಬಗ್ಗೆ ಕೆಲಹೊತ್ತು ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ಆಲಿಸಿ ಅವರ ಪ್ರೀತಿಯ ಆತಿಥ್ಯ ಸ್ವೀಕರಿಸಿದರು.
ಇದೇ ವೇಳೆ ಬುದ್ಧನ ನೆಲವಾಗಿ ರೂಪುಗೊಂಡಿರುವ ಬೈಲುಕುಪ್ಪೆಯಲ್ಲಿ ನಿರ್ಮಿಸಲಾದ ಬುದ್ಧ ಮೂರ್ತಿಯನ್ನು ವೀಕ್ಷಣೆ ಮಾಡಿದರು.



0 Comments