ಮನೆ ಬೀಗ ಮುರಿದು ಚಿನ್ನಾಭರಣ ದೋಚಿ ಪರಾರಿಯಾದ ಖದೀಮ

 ಆಲೂರು: ತಾಲ್ಲೂಕಿನ ಪಾಳ್ಯ ಹೋಬಳಿ ಚಿಕ್ಕಕಣಗಾಲು ಜನತಾ ಕಾಲೊನಿಯ ಪುರೋಹಿತ ನಾಗೇಶ್ ಎಂಬುವರ ಮನೆ ಬೀಗ ಮುರಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವು ಮಾಡಿ ಪರಾರಿಯಾಗಿದ್ದಾರೆ.



ಗ್ರಾಮದ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿರುವ ಚೋರರು ಸುಮಾರು 6.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1 ಲಕ್ಷ ನಗದು ದೋಚಿ ಕಳ್ಳರು ಪರಾರಿ ಆಗಿರುವ ಘಟನೆ ಆಲೂರು ತಾಲೂಕಿನ ಚಿಕ್ಕಣಗಾಲು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ನಿವಾಸಿಗಳಾದ ನಾಗೇಶ್ ಹಾಗೂ ಶಿವಮ್ಮ ದಂಪತಿಗಳು ಕೂಲಿ ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು ಕೃತ್ಯ ಎಸಗಿದ್ದಾರೆ.

ಕಬ್ಬಿಣದ ಸಲಕಿಗಳನ್ನು ಬಳಸಿ ಮನೆಯೊಳಗಿನ ಬೀರು ಒಡೆದು ಅದರಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ತಮ್ಮ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ಮಾಲೀಕರಿಗೆ ಮನೆ ಬಾಗಿಲು ಚಿಲಕದ ಕೊಂಡಿ ಮುರಿದಿರುವುದು ಗಮನಿಸಿ. ಒಳಗೆ ಹೋಗಿ ನೋಡಿದಾಗ ಬೀರುನಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ನಗದು ಕಳವಾಗಿರುವುದು ಗೊತ್ತಾಗಿದೆ. ಶಾಕ್ ಆಗಿದ್ದು ಕಷ್ಟಪಟ್ಟು ದುಡಿದು ಸಂಪಾದಿಸಿದ್ದ ಹಣ ಹಾಗೂ ಒಡವೆಗಳನ್ನು ಕಳೆದುಕೊಂಡು ಕುಟುಂಬ ಕಂಗಾಲಾಗಿ ಆಲೂರು ಪಟ್ಟಣದ ಪೊಲೀಸ್ ಠಾಣೆಗೆ ಫೋನ್ ಮಾಡಿ ನಮ್ಮ ಮನೆಯಲ್ಲಿ ಕಳ್ಳತನವಾಗಿದೆ ಎಂದು ದೂರು ಸಲ್ಲಿಸಿದ್ದಾರೆ.

ಸ್ಥಳಕ್ಕೆ ಆಲೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಂಗಾಧರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಈ ಪ್ರಕರಣ ಆಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಪೋಟೋ ಕ್ಯಾಪ್ಶನ್: ತಾಲ್ಲೂಕಿನ ಪಾಳ್ಯ ಹೋಬಳಿ ಚಿಕ್ಕಕಣಗಾಲು ಜನತಾ ಕಾಲೊನಿಯ ಪುರೋಹಿತ ನಾಗೇಶ್ ಎಂಬುವರ ಮನೆ ಬೀಗ ಮುರಿದು ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವು ಮಾಡಿ ಪರಾರಿಯಾಗಿದ್ದಾರೆ.

Post a Comment

0 Comments