ಅರಕಲಗೂಡು: ಕೃಷಿ ಪಂಪ್ ಸೆಟ್‌ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಶಾಸಕ ಎ.ಮಂಜು ನೇತೃತ್ವದಲ್ಲಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಅನಕೃ ವೃತದಲ್ಲಿ ಸೇರಿದ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವುಕ್ತಪಡಿಸಿದರು.
ಸಮರ್ಪಕವಾಗಿ ವಿದ್ಯುತ್ ಸರಬರಾಜಿಲ್ಲದ ಕಾರಣ ರೈತರು ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗದೆ ಬೆಳೆಗಳು ಒಣಗುತ್ತಿವೆ. ತಾಲೂಕಿನ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ನಿರಂತರ 7ಗಂಟೆ ವಿದ್ಯುತ್ ಸರಬರಾಜಾಗುತ್ತಿಲ್ಲ. ಈ ಕುರಿತು ಕೆಪಿಟಿಸಿಲ್ ಅಧಿಕಾರಿಗಳೊಂದಿಗೆ ಚರ್ಚಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಮಂಜು ಕಿಡಿಕಾರಿದರು.
ಪಟ್ಟಣಕ್ಕೆ 30 ಮೆಗಾವ್ಯಾಟ್ ವಿದ್ಯತ್ ಸರಬರಾಜಾಗಬೇಕಿದ್ದು, 25 ಮೇಗಾ ವ್ಯಾಟ್ ಮಾತ್ರ ಸರಬರಾಜು ಮಾಡಲಾಗುತ್ತಿದೆ. ಉಳಿದ 5 ವಿದ್ಯುತ್ ಅನ್ನು ಖಾಸಗಿ ಕಾರ್ಖಾನೆಗೆ ಅಕ್ರಮವಾಗಿ ಸರಬರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಸೀಬಳ್ಳಿ ಯೋಗಣ್ಣ ಮಾತನಾಡಿದರು. ತಹಸೀಲ್ದಾರ್ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖಂಡರಾದ ನಂಜುಂಡಸ್ವಾಮಿ, ಎಂ.ಎಸ್.ಯೋಗೇಶ್, ಚಂದ್ರಶೇಖರ್, ಶ್ರೀನಿವಾಸಮೂರ್ತಿ, ರವಿಕುಮಾರ್, ರಘು, ಮಂಜುನಾಥ್ ಇತರರು ಇದ್ದರು.



0 Comments