ಹಾಸನ: ಇಂದಿನ ಯುವಜನತೆ ಮೊಬೈಲ್ ಬಳಸುವುದರಿಂದ ಆಗುವ ಅನಾನುಕೂಲಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರಬೇಕು. ಮತ್ತು ಯುವಜನತೆ ಅದನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಬೇಕೆಂದು ಹಾಸನ ಪಿಎಸ್‌ಐ ಆನಂದ್ ಕರೆ ನೀಡಿದರು
ಬಿಎಸ್‌ಎಸ್ ಸಂಸ್ಥೆಯ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಹಾಸನ ಪಿಎಸ್‌ಐ ಆನಂದ್ ಭಾಗಿಯಾಗಿ ಮಾತನಾಡಿದರು.
ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದರ ಮುಖಾಂತರ ತಮ್ಮ ಗುರಿಗಳನ್ನು ಸಾಧಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ನಡವಳಿಕೆ ಮೇಲೆ ನಿಗಾವಹಿಸುವ ಅವಶ್ಯಕತೆ ಇದೆ ಎಂದು ತಿಳಿಸಿದರು.
ಇತ್ತೀಚಿಗೆ ನಡೆಯುತ್ತಿರುವ ಸೈಬರ್ ಕ್ರೈಂ ಗಳ ಬಗ್ಗೆ ಯುವಜನತೆಗೆ ಸಭೆಯಲ್ಲಿ ಮನವರಿಕೆ ಮಾಡಿದರು. ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು, ಗುರಿಯನ್ನು ಬೆನ್ನತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದರು.
ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ಸಿಒಒ ಎಸ್ ಪಂಚಾಕ್ಷರಿ ಮಾತನಾಡಿ, ಮಹಿಳೆಯರು ಅವಶ್ಯಕತೆಗೆ ತಕ್ಕಷ್ಟು ಸಾಲವನ್ನು ಪಡೆದು ಮರುಪಾವತಿ ಶಿಸ್ತನ್ನು ಕಾಪಾಡಿಕೊಳ್ಳಬೇಕು. ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಕೇವಲ ಸಾಲ ಸೌಲಭ್ಯವನ್ನು ಮಾತ್ರವಲ್ಲದೆ ಸಂಸ್ಥೆಯು ಎಲ್ಲಾ ಕಡೆಗೂ ಸಮಾಜಮುಖಿ ಕಾರ್ಯಗಳಾದ ಶಾಲಾ ಅಭಿವೃದ್ಧಿ, ಪ್ರವಾಹ, ಬರಗಾಲ ಮತ್ತು ಸರ್ಕಾರಿ ಶಾಲೆಗಳ ಅಭಿವೃದ್ಧಿ ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ವ್ಯವಸ್ಥಾಪಕ ಪಂಡಿತ್ ಗಂಗಾಧರ ಪಾಟೀಲ್, ಸ್ಟೀಟ್ ಹೆಡ್ ಜಗದೀಶ ಹೆಚ್.ವಿ., ಡಿಎಂ ಪ್ರಸನ್ನ, ಅಸಿಸ್‌ಟೆಂಡ್ ಮ್ಯಾನೇಜರ್ ಪ್ರಶಾಂತ್ ಕುಮಾರ್, ಸ್ಟೀಟ್ ಹೆಡ್ ಟ್ರೈನಿಂಗ್ ಕರುಣ್ ಕುಮಾರ್, ಝಡ್‌ಎಂಒ ಪ್ರದೀಪ ಡಿ., ಹರೀಶ್‌ಕುಮಾರ ಭಾಗವಹಿಸಿದ್ದರು.



0 Comments