ಸುದ್ದಿ ವಿಜಯ
ಬೇಲೂರು : ಪಟ್ಟಣದಲ್ಲಿ ಹಳೇಯ ಪಾಳುಬಿದ್ದ ಕಟ್ಟಡವೊಂದು ದಿಢೀರ್ ಕುಸಿದು ದೊಡ್ಡ ಅನಾಹುತ ನಡೆದಿದೆ ಈ ಘಟನೆಯಲ್ಲಿ ಇಬ್ಬರು ಬೀದಿ ಬದಿ ವ್ಯಾಪಾರಿಗಳು ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ
ಅಮರ್ ನಾಥ್ ಹಾಗೂ ನಜೀರ್ ಮೃತರು. ಪ್ರಾಥಮಿಕ ಮಾಹಿತಿಯಂತೆ, ಪಾಳುಬಿದ್ದ ಈ ಕಟ್ಟಡದ ಕೆಳಗೆ ಬೀದಿ ಬದಿ ವ್ಯಾಪಾರಿಗಳು ತಮ್ಮ ವ್ಯಾಪಾರ ಮಾಡುತ್ತಿದ್ದರು. ದಿಢೀರ್ ಎಂದು ಈ ಕಟ್ಟಡ ಕುಸಿದು ಬಿದ್ದಿದೆ. ನಾಲ್ವರು ಮಹಿಳೆಯರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದರು. ಅದರಲ್ಲೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ತಕ್ಷಣವೇ ಪೊಲೀಸರಿಗೂ ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದ್ದು. ರಕ್ಷಣಾ ಕಾರ್ಯಾಚರಣೆ ಮುಂದುವರಿಸಿ ರಕ್ಷಣೆಗಾಗಿ ಬೇಲೂರು ಪೊಲೀಸರು ತ್ವರಿತ ಕ್ರಮ ಘಟನೆ ಕುರಿತು ಮಾಹಿತಿ ಪಡೆದ ಬೆನ್ನಲ್ಲೇ ಬೇಲೂರು ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಒಳಗೆ ಸಿಲುಕಿರುವವರನ್ನು ರಕ್ಷಿಸಿದ್ದಾರೆ.
ಸ್ಥಳಕ್ಕೆ ಸ್ಥಳೀಯ ಶಾಸಕ ಹುಲ್ಲಳ್ಳಿ ಸುರೇಶ್ ಭೇಟಿ : ಗಾಂಧಿಬಜಾರ್‌ನಲ್ಲಿ ಹಳೇ ಕಟ್ಟಡದ ಸಜ್ಜಾ ಕುಸಿದು ಇಬ್ಬರು ಸಾವಿಗೀಡಾದ ದಾರುಣ ಘಟನೆಯ ಬಳಿಕ, ಸ್ಥಳೀಯ ಶಾಸಕರಾದ ಎಚ್.ಕೆ. ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಸಭೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ ಅವರು, “ನಿಮ್ಮ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ” ಎಂದು ಆರೋಪಿಸಿದರು.
ಘಟನೆ ನಡೆದ ಸ್ಥಳದಲ್ಲಿ ಶೋಕದಲ್ಲಿ ಮುಳುಗಿದ್ದ ಜನರನ್ನು ಸಮಾಧಾನಪಡಿಸಿದ ಶಾಸಕರು, ಈ ಕಟ್ಟಡ ಹಳೆಯದು ಎಂಬ ಮಾಹಿತಿ ನೀವು ಮುಂಚಿನಿಂದಲೇ ಹೊಂದಿದ್ದರೆ, ಮುನ್ನೆಚ್ಚರಿಕೆ ಏಕೆ ತೆಗೆದುಕೊಳ್ಳಲಿಲ್ಲ? ಎಂದು ಪುರಸಭೆ ಮುಖ್ಯಾಧಿಕಾರಿ ಸುಜಯ್ ಹಾಗೂ ಪಿಡಬ್ಲ್ಯುಡಿ ಅಧಿಕಾರಿ ಕೃಷ್ಣಮೂರ್ತಿಯನ್ನು ತರಾಟೆಗೆ ತೆಗೆದುಕೊಂಡರು
ಅಮಾಯಕರ ವ್ಯಾಪಾರಿಗಳು ಹೊಟ್ಟೆಪಾಡಿಗೆ ಬಂದು ಶಿಥಿಲ ಗೊಂಡ ಕಟ್ಟಡದ ಸಜ್ಜಾ ಕೆಳಗೆ ಕುಳಿತು ವ್ಯಾಪಾರ ಮಾಡುತ್ತಿದ್ದರು. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಡ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.
ಸಂಸದ ಶ್ರೇಯಸ್ ಪಟೇಲ್ ಜಿಲ್ಲಾಸ್ಪತ್ರೆಗೆ ಭೇಟಿ : ಬೇಲೂರಿನಲ್ಲಿ ಹಳೇ ಕಟ್ಟಡ ಕುಸಿದ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಹಾಗೂ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಈ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೀಲಮ್ಮನ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದ ಸಂಸದ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಆಸ್ಪತ್ರೆ ವೈದ್ಯಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.





0 Comments