ಆಲೂರು : ಕಿರಗಡಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಹಾಲಿ ಹಾಸನ ಹೆಚ್ ಡಿ. ಸಿ. ಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್ ರವರ ಸಾರಥ್ಯದಲ್ಲಿ ಅಧ್ಯಕ್ಷರಾಗಿ ಶಾಂತಪ್ಪ ದೇವರಮನೆಕೊಪ್ಪಲು ಹಾಗೂ ಉಪಾಧ್ಯಕ್ಷರಾಗಿ ಕೆ. ಟಿ. ಧರ್ಮ ಅವಿರೋಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ಶಾಂತಪ್ಪ ಮಾತನಾಡಿ ಜಿಲ್ಲಾ ಎಚ್ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್ ಮತ್ತು ಸಂಘದ ಎಲ್ಲರ ಸಹಕಾರದಿಂದ ಅಧ್ಯಕ್ಷರಾಗಲು ಸಾಧ್ಯವಾಯಿತು ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಸರ್ಕಾರದಿಂದ ಬರುವ ಎಲ್ಲಾ ಸೌವಲತ್ತುಗಳನ್ನು ರೈತರು ಹಾಗೂ ಸಾರ್ವಜನಿಕರಿಗೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಕಬ್ಬಿನಹಳ್ಳಿ ಜಗದೀಶ್ ಮಾತನಾಡಿ, ರೈತರಿಗೆ ಸಹಕಾರ ಸಂಘಗಳು ಅತ್ಯಂತ ಉಪಯುಕ್ತ ಕೇಂದ್ರಗಳಾಗಿವೆ ಸಹಕಾರ ಸಂಘದಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಸೇರಿದಂತೆ ಹಲವು ಯೋಜನೆಗಳಿದ್ದು ರೈತರು ಅವುಗಳನ್ನ ಸದ್ಬಡಿಕೆ ಮಾಡಿಕೊಳ್ಳಬೇಕು ಸಂಘದ ಅಧ್ಯಕ್ಷರು ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಒಗ್ಗಟ್ಟಿನಿಂದ ಸಂಘದ ಅಭಿವೃದ್ಧಿ ಪಡಿಸುವುದರ ಜೊತೆಗೆ ರೈತರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಗೋಪಿನಾಥ್, ಬಸವರಾಜು, ರುದ್ರೇಗೌಡ ಕಿರಗಡಲು, ಜಯಣ್ಣ, ಹೆಚ್. ಎಲ್. ಕರೀಗೌಡ, ಮಂಜಶೆಟ್ಟಿ, ರುದ್ರೇಗೌಡ ಕಿರಗಡಲು ಕೊಪ್ಪಲು, ಈರಾಜಮ್ಮ, ವನಜಾಕ್ಷಿ, ಹಾಗೂ ಮುಖ್ಯಕಾರ್ಯನಿರ್ವಹಾಣಾಧಿಕಾರಿಗಳಾದ ಮಹೇಶ್ ಕೆ. ವಿ. ಊರಿನ ಹಿರಿಯ ಹಾಗೂ ಕಿರಿಯ ಮುಖಂಡರುಗಳು ಗ್ರಾಮಸ್ಥರು ಮುಂತಾದವರು ಹಾಜರಿದ್ದು ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ನಿರ್ದೇಶಕರನ್ನು ಅಭಿನಂದಿಸಿದ್ದಾರೆ.




0 Comments