ಎಸ್‌ಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಕ್ರಮ

 ಬೇಲೂರು: ತಾಲೂಕಿನ ಅರೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ)ದಲ್ಲಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆ ಮಾದರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಲ್ಪಿತ ಪರೀಕ್ಷೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಪರಿಶೀಲಿಸಿದರು.



ಈ ವೇಳೆ ಮಾತನಾಡಿ, ಎಸ್‌ಸ್‌ಎಲ್‌ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಶಾಲೆಯ ಎಲ್ಲ ಕೊಠಡಿಗಳಿಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶ್ನೆ ಪತ್ರಿಕೆಗಿಂತ ರಾಜ್ಯ ಮಟ್ಟದ ಪ್ರಶ್ನೆ ಪತ್ರಿಕೆ ವಿದ್ಯಾರ್ಥಿ ಸ್ನೇಹಿಯಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವಂತಿದೆ. ಫಲಿತಾಂಶದ ಸುಧಾರಣೆಯ ನಿಟ್ಟಿನಲ್ಲಿ ಪಾಸಿಂಗ್ ಪ್ಯಾಕೇಜ್ ಹಾಗೂ ಸ್ಕೋರಿಂಗ್ ಪ್ಯಾಕೇಜ್ ಗಳನ್ನು ನೀಡಲಾಗಿದೆ. ತಮ್ಮ ಶಾಲೆಯ ಫಲಿತಾಂಶದ ಜತೆಗೆ ತಾಲೂಕಿನ ಫಲಿತಾಂಶದಲ್ಲಿ ಸುಧಾರಣೆ ತರಲು ಎಲ್ಲ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪರೀಕ್ಷೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವುದರಿಂದ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಕಲಿಕೆಯತ್ತ ಹೆಚ್ಚಿನ ಗಮನ ಕೊಟ್ಟು ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.

ಶಿಕ್ಷಣ ಸಂಯೋಜನಾಧಿಕಾರಿಗಳಾದ ಗೋಪಾಲ್, ಜಗದೀಶ್, ಮುಖ್ಯಶಿಕ್ಷಕಕರಾದ ಎಸ್.ಎನ್.ಶಿವಕುಮಾರ್, ಮಂಜುಳಾ, ಸಹ ಶಿಕ್ಷಕರಾದ ಪಾಟೀಲ್, ಪ್ರವೀಣ್, ನವೀನ್, ಪ್ರಸನ್ನ ಅರಸ್ ಇತರರಿದ್ದರು.


Post a Comment

0 Comments