ಸಕಲೇಶಪುರ: ಕೃಷಿ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳನ್ನು ಸಹಾಯಧನದಲ್ಲಿ ರೈತರಿಗೆ ವಿತರಿಸಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಯು.ಎಂ. ಪ್ರಕಾಶ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ, ತುಂತುರು ನೀರಾವರಿ ಘಟಕಗಳನ್ನು ಶೇಕಡಾ 90ರ ಸಹಾಯಧನದಲ್ಲಿ ನೀಡಲಾಗುವುದು. ನಿಗದಿತ ಅರ್ಜಿ ಮತ್ತು ದಾಖಲಾತಿಗಳನ್ನು ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು.
ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹೋಬಳಿಗಳ ರೈತ ಸಂಪರ್ಕ ಕೇಂದ್ರಗಳನ್ನು ಮತ್ತು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಎಂದು ತಿಳಿಸಿದ್ದಾರೆ.


0 Comments