ಪಿ.ಸಿ & ಪಿ.ಎನ್.ಡಿ.ಟಿ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಕಾರ ಅಗತ್ಯ

 ಹಾಸನ :- ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಇದನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಅನಿಲ್ ಹೆಚ್ ಅವರು ತಿಳಿಸಿದ್ದಾರೆ.


 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪಿ.ಸಿ & ಪಿ.ಎನ್.ಡಿ.ಟಿ ಸಲಹಾ ಸಮಿತಿ ಹಾಗೂ ಡಿ.ಐ.ಎಂ.ಸಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಈ ಕಾಯ್ದೆಯ ಕುರಿತು ಹೆಚ್ಚಿನ ಅರಿವು ಮೂಡಿಸಲು ಗ್ರಾಮೀಣ ಮಟ್ಟದಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗೃಹಿಣಿಯರಿಗೆ ಮತ್ತು ಹದಿಹರೆಯದ ಹೆಣ್ಣು ಮಕ್ಕಳು ಹಾಗೂ ತಾಯಂದಿರ ಸಭೆಗಳಲ್ಲಿ ಈಗಾಗಲೇ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಸಾರ್ವಜನಿಕರಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರೇಡಿಯೋ ಪೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಡಾ|| ಭಾರತಿ ರಾಜಶೇಖರ್, ಡಾ|| ಸಾವಿತ್ರಿ, ವಕೀಲರಾದ ರವಿ ಶಂಕರ್, ಡಾ|| ಸಚ್ಚಿನ್, ಡಾ|| ಲಕ್ಷಿö್ಮಕಾಂತ್, ಕೆ.ಟಿ ಜಯಶ್ರೀ, ಮಮತ ಶಿವು, ಡಾ|| ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments