ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಲು ಸೂಚನೆ

ಹಾಸನ :- ಮುಂಗಾರಿನಲ್ಲಿ ಬಿತ್ತನೆ ಬೀಜ ಮತ್ತು ಡಿ.ಎ.ಪಿ.ಮತ್ತು ಯೂರಿಯಾ ಗೊಬ್ಬರ ಸಮರ್ಪಕವಾಗಿ ರೈತರಿಗೆ ಒದಗಿಸಲು ಮುಂಜಾಗ್ರತೆ ವಹಿಸಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 



ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿAದು ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಕೃಷಿ ಬೆಳೆಗಳು ನಾಶವಾಗಿ ನಷ್ಟವಾಗುತ್ತಿರುವ ಬಗ್ಗೆ ಮುಂದಿನ ಮುಂಗಾರಿನ ಕೃಷಿ ಚಟುವಟಿಕೆ ಕುರಿತು ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಲು ಕ್ರಮವಹಿಸಿಕೃಷಿಕರಿಗೆ ಮನವರಿಕೆ ಮಾಡಿಕೊಡಲು ತಿಳಿಸಿದರು.

ಫಸಲ್ ಭಿಮಾ ಯೋಜನೆಯಡಿ ಹೆಚ್ಚಿನ ಪ್ರಚಾರ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ತೆಂಗು ಬೆಳೆಗೆ ಕಾಡುವ ಕೀಟಬಾಧೆಗಳನ್ನು ತಡೆಗಟ್ಟಲು ತೆಂಗು ಬೆಳೆಗಾರರ ನೆರವಾಗುವಂತೆ ಪ್ರಾತ್ಯಕ್ಷಿಕೆ ಮೂಲಕ ಕಾಲ ಕಾಲಕ್ಕೆ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.

ಹನಿ ನೀರಾವರಿಗೆ ಹೆಚ್ಚು ಒತ್ತು ನೀಡಬೇಕು ಎಂದರಲ್ಲದೆ, ಬೆಳೆ ನಷ್ಟಕ್ಕೆ ಪರಿಹಾರ ಒದಗಿಸಲು ನೆರವಾಗುವಂತೆ ವರದಿ ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಾನುವಾರುಗಳ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಕಡ್ಡಾಯವಾಗಿ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಲೀಡ್ ಬ್ಯಾಂಕ್ ಮತ್ತು ಪಶು ಪಾಲನಾ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ರೈತರಿಗೆ ನೆರವಾಗಿ ಎಂದು ಸೂಚಿಸಿದರು.

ಹೈನುಗಾರಿಕೆ ನಂಬಿಕೊAಡು ಜೀವನ ನಡೆಸುತ್ತಿದ್ದಾರೆ ಸಮಯಕ್ಕೆ ಸರಿಯಾಗಿ ಸ್ಪಂದಿಸಿ ರೈತರಿಗೆ ನೆರವಾಗಿ ಎಂದು ತಿಳಿಸಿದರು.ತಾಲ್ಲೂಕು ಆಸ್ಪತ್ರೆಗಳಲ್ಲಿ ಯಾವುದೇ ಸಂದರ್ಭದಲ್ಲಿ ರೋಗಿಗಳು ಬಂದರು ಪ್ರಾಥಮಿಕ ಚಿಕಿತ್ಸೆ ನೀಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಂಬುಲೆನ್ಸ್ ಚಾಲಕರು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ ಬಿಲ್ ಕಟ್ಟಲು ಹಣ ಹೊಂದಿಸಲು ಸಾಧ್ಯವಿಲ್ಲದೆ ಆಸ್ತಿ ಮಾರಾಟ ಮಾಡಿಕೊಳ್ಳುವಂತೆ ಮಾಡುತ್ತಿದ್ದೀರಿ ಮುಂದೆ ಈಗಾಗದಂತೆ ನಿಗಾವಹಿಸಲು ಅಂಬುಲೆನ್ಸ್ ಸಂಯೋಜಕರಿಗೆ ಎಚ್ಚರಿಕೆ ನೀಡಿದರು. 

ಎ.ಬಿ.ಆರ್.ಕೆ.ನೋಂದಣಿಗೆ ಹೆಚ್ಚು ಒತ್ತು ನೀಡಿ ಎಂದರಲ್ಲದೆ, ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ವೈದ್ಯರು ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು. 

ಅಪೌಷ್ಟಿಕತೆ ಹೊಂದಿರುವ ಮಕ್ಕಳಿಗೆ ಅಂಗನವಾಡಿಗಳಲ್ಲಿಪೂರಕ ಆಹಾರ ಒದಗಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ಹುದ್ದೆಗೆ ನೇಮಕಾತಿ ಸಂದರ್ಭದಲ್ಲಿ ವಿಧವೆಯರಿಗೆ ಹಾಗೂ ಸ್ಥಳೀಯರಿಗೆ ಆದ್ಯತೆ ನೀಡುವಂತೆ ತಿಳಿಸಿದರಲ್ಲದೆ, ದಾಖಲೆಗಳಿಗೆ ತಾಲ್ಲೂಕು ಕಛೇರಿಗಳಿಗೆ ಅಲೆದಾಟ ಮಾಡುವುದನ್ನು ತಪ್ಪಿಸಿ ಎಂದ ಅವರು ನೇಮಕಾತಿ ಬಗ್ಗೆ ಏನೇ ದೂರುಗಳು ಬಂದರು ಕ್ರಮ ಕೈಗೊಳ್ಳುವಂತೆ ಪತ್ರ ಬರೆಯಲಾಗುವುದು ಎಂದು ಉಪ ನಿರ್ದೇಶಕರಿಗೆ ಎಚ್ಚರಿಕೆ ನೀಡಿದರು.

ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆಯಲು ಶ್ರಮವಹಿಸಿ ಮಕ್ಕಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಶಿಕ್ಷಕರು ಮೈಚಳಿ ಬಿಟ್ಟು ಕರ್ತವ್ಯ ನಿರ್ವಹಿಸಲು ಸೂಚಿಸಿದರು.

ಇಬ್ಬರು ಶಿಕ್ಷಕರು ಇರುವ ಶಾಲೆಗಳಲ್ಲಿ ಶಿಕ್ಷಕರು ದಿನ ಬಿಟ್ಟು ದಿನ ಶಾಲೆಗೆ ಹೋಗುತ್ತಿದ್ದಾರೆ ಇದರ ಬಗ್ಗೆ ಎಚ್ಚರವಹಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಒಂದರಿAದ ಏಳನೇ ತರಗತಿ ಶಿಕ್ಷಕರ ಬಗ್ಗೆ ಗಮನಹರಿಸಿ ಶಾಲೆಗೆ ಸರಿಯಾಗಿ ಹೋಗುವುದಿಲ್ಲ, ಮಕ್ಕಳಿಗೆ ಸರಿಯಾಗಿ ಗುಣಮಟ್ಟದ ಶಿಕ್ಷಣ ನೀಡಲು ಗಮನಹರಿಸುತ್ತಿಲ್ಲ ಇದರ ಬಗ್ಗೆ ಹೆಚ್ಚಿನ ನಿಗಾವಹಿಸಿ ಎಂದು ಸೂಚಿಸಿದರು.

ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡದೆ ಪ್ರೌಢಶಾಲೆಯಲ್ಲಿ ಅವರನ್ನು ತಯಾರು ಮಾಡುವುದಾದರು ಹೇಗೆ ಎಂದು ಪ್ರಶ್ನೆ ಮಾಡಿದರು.

ಶಾಲಾ ಕಟ್ಟಡಗಳ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಮಕ್ಕಳನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ತಿಳಿಸಿದರಲ್ಲದೆ, ವಸತಿ ನಿಲಯಗಳ ನ್ಯೂನ್ಯತೆಗಳನ್ನು ಸರಿಪಡಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರ ಪ್ರದೇಶಗಳಲ್ಲಿರುವ ಹಾಸ್ಟೆಲ್‌ಗಳ ಮೇಲೆ ತುಂಬಾ ದೂರುಗಳಿವೆ ಎಂದ ಅವರು ಹಾಸ್ಟೆಲ್ ಗಳಲ್ಲಿ ವಾರ್ಡ್ ನ್ ಮತ್ತು ಅಡಿಗೆಯವರಲ್ಲಿ ಸಮನ್ವಯತೆಯಿಲ್ಲ ಮಕ್ಕಳು ಯಾರ ನಿಯಂತ್ರಣಕ್ಕೆ ಸಿಗದಂತೆ ಆಗುತ್ತಿದೆ ಎಂದರು.

ವಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜಿಲ್ಲೆಗೆ ೧೫ ಕೆ.ಪಿ.ಎಸ್.ಸಿ.ಶಾಲೆಗಳು ಪ್ರಾರಂಭಿಸಲು ಅವಕಾಶ ದೊರೆತಿದೆ. ೫ ಕಿ.ಮೀವ್ಯಾಪ್ತಿಯ ಕಡಿಮೆ ಮಕ್ಕಳಿರುವ ಶಾಲೆಗಳನ್ನು ಒಂದುಗೂಡಿಸ ಲಾಗುತ್ತಿದೆ.ಇದರಲ್ಲಿ ೧೩೬ ಶಾಲೆಗಳು ಸೇರುತ್ತಿವೆ ಎಂದು ಸಭೆಗೆ ಮಾಹಿತಿ ನೀಡಿದರು.

ರಾಷ್ಟಿçÃಯ ಹೆದ್ದಾರಿ ೭೫ ರಲ್ಲಿಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸುವಂತೆ ಸೂಚಿಸಿದರಲ್ಲದೆ, ದೊಣಿಗಲ್ ಮತ್ತು ದೊಡ್ಡ ತಪ್ಪಲು ಮಳೆಗಾಲ ಪ್ರಾರಂಭವಾಗುವುದರಲ್ಲಿ ಪೂರ್ಣಗೊಳಿಸ ಬೇಕು ನವೆಂಬರ್‌ಗೆ ಮುಗಿಸುವೂದಾಗಿ ಹೇಳಿದ್ದೀರಿ ಈಗ ನೋಡಿದರೆ ಸಮಯ ಮುಗಿಯುತ್ತಿದೆ ಆದರೆ ಕೆಲಸ ಪೂರ್ಣಗೊಂಡಿಲ್ಲ ಎಂದರು.ಹೀಗೆ ಮುಂದೆ ಹಾಕುತ್ತಿದ್ದೀರಿ ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬೂವನಹಳ್ಳಿ ಕ್ರಾಸ್, ಚನ್ನಪಟ್ಟಣ ವೃತ್ತ ಹಾಗೂ ರಾಜೀವ್ ಕಾಲೇಜು ಬಳಿ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಜಿಲ್ಲಾ ವಲಯದಲ್ಲಿ ಚನ್ನಪಟ್ಟಣ ಬೈಪಾಸ್ ಬಳಿ, ಬೆಂಡೆಕೆರೆ, ಶಾಣೆಗೆರೆ ಬಂದ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಚನ್ನಪಟ್ಟಣ ಕೆರೆ ಅಂಗಳದಲ್ಲಿರುವ ಲೇಕ್ ಅಭಿವೃದ್ಧಿ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.

ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿAದ ಅಮೃತ್ ಯೋಜನೆಯಡಿ ಆಲೂರು ಮತ್ತು ಸಕಲೇಶಪುರ, ಅರಕಲಗೂಡು ಪಟ್ಟಣಕ್ಕೆ ನೀರು ವಿತರಣಾ ವ್ಯವಸ್ಥೆ ಕಲ್ಪಿಸುವ ಯೋಜನೆ, ಉದ್ಯೋಗ ಮೇಳ ನಡೆಸುವ ನಿಟ್ಟಿನಲ್ಲಿ ಹೆಚ್ಚಿನ ಅಭ್ಯರ್ಥಿಗಳ ನೋಂದಣಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜೆ.ಜೆ.ಎಂ.ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಚೆಸ್ಕಾಂಗೆ ಹಣ ಠೇವಣಿ ಇಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಕಾಮಗಾರಿ ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು 

ಎನ್.ಆರ್.ವೃತ್ತದ ರೈಲ್ವೆ ಆರ್ ಒ.ಬಿ. ಕಾಮಗಾರಿಯನ್ನು ಪೂರ್ಣಗೊಳಿಸಲು ಏನೇನು ಸಮಸ್ಯೆ ಇದೆ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದುದ್ದ ಆರ್.ಒ.ಬಿ.ಯಾವಾಗ ಮಾಡುತ್ತೀರಾ ಎಂದು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಪ್ರಶ್ನಿಸಿದರು ಅಲೈನ್ ಮೆಂಟ್ ಲೈನ್ ಬದಲಾವಣೆ ಆಗಬೇಕು ಈ ನಿಟ್ಟಿನಲ್ಲಿ ಭೂಸ್ವಾಧೀನ ಆಗಬೇಕು ಎಂದು ತಿಳಿಸಿದರು. ಸಂಸದರು ಮಾತನಾಡಿ ಕಾಮಗಾರಿ ಕೈಗೊಳ್ಳಲು ಚುರುಕುಗೊಳಿಸಿ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆಗಳ ನಿರ್ವಹಣೆ ಕಾಮಗಾರಿಗಳನ್ನು ಪ್ರಾರಂಭಿಸಲು ಲೋಕೋಪಯೋಗಿ ಇಲಾಖೆಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲಾಧಿಕಾರಿ ನೂತನ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಸಹ ಗಮನಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ಪತ್ತೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಬೇಕರಿ ಹೊಟೇಲ್, ಡಾಬಾ, ಗ್ಯಾರೇಜ್ ಮತ್ತಿತರ ಕಡೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಏನೇನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರಲ್ಲದೆ, ತಡೆಗಟ್ಟಲು ಎಚ್ಚರಿಕೆವಹಿಸಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿಸಬೇಕು, ಕುಡಿಯುವ ನೀರಿನ ಪೈಪ್ ಲೈನ್ ಮತ್ತು ಒಳಚರಂಡಿ ಪೈಪ್ ಲೈನ್‌ಗಳ ಲಿಂಕ್ ಆಗಿದೆಯೇ ಎಂದು ಪರೀಕ್ಷಿಸಿ ಎಂದರಲ್ಲದೆ, ನೀರಿನ ಟ್ಯಾಂಕ್ ಗಳನ್ನು ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೊಳಚೆ ನಿರ್ಮೂಲನಾ ಮಂಡಳಿವತಿಯಿAದ ಕಾರ್ಮಿಕ ರಿಗಾಗಿ ನಿರ್ಮಾಣ ಮಾಡುತ್ತಿರುವ ಮನೆಗಳಕಾಮಗಾರಿ ಪೂರ್ಣಗೊಳಿಸಲು ಏಕೆ ವಿಳಂಬ ಮಾಡುತ್ತಿದ್ದೀರಿ ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿಗಳು ಬಸ್‌ನಲ್ಲಿ ನೇತಾಡಿಕೊಂಡು ಬರುತ್ತಿರುತ್ತಾರೆ ಏನಾದರೂ ತೊಂದರೆ ಆಗದಂತೆ ವಿದ್ಯಾರ್ಥಿ ಗಳಿಗೆ ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯ ಬಸ್ ಗಳನ್ನು ಹಾಕುವಂತೆ ಕೆ.ಎಸ್.ಆರ್.ಟಿ.ಸಿ.ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಹಾಸನದ ಸಿಟಿ ಬಸ್ ನಿಲ್ದಾಣದಲ್ಲಿ ತಾಯಂದಿರು ಮಗುವಿಗೆ ಹಾಲುಣಿಸಲು ಸಹಕಾರಿ ಆಗುವಂತೆ ಕೊಠಡಿ ನಿರ್ಮಾಣಕ್ಕೆ ಸೂಚಿಸಿದರು.

ಅರೆಹಳ್ಳಿ ವ್ಯಾಪ್ತಿಯಲ್ಲಿ ಬಸ್ ನಿಲುಗಡೆಗೆ ಅವಕಾಶ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿAಗೇಗೌಡ ಜಿಲ್ಲೆಯಲ್ಲಿ ತೆಂಗು ಬೆಳೆಗೆ ಬರುತ್ತಿರುವ ಕೀಟಬಾದೆಯನ್ನು ನಿಯಂತ್ರಣಕ್ಕಾಗಿ ಏಕ ಕಾಲದಲ್ಲಿ ಔಷಧಿ ಸಿಂಪರಣೆಗೆ ಕ್ರಮವಹಿಸಬೇಕು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಿಟ್ಟಿನಲ್ಲಿ ವಿಶೇಷ ಅನುದಾನ ತಂದು ತೆಂಗು ಬೆಳೆ ಉಳಿಸಬೇಕು ಎಂದು ಸಂಸದರಲ್ಲಿ ಮನವಿ ಮಾಡಿದರು.

ಆಸ್ಪತ್ರೆಗಳಲ್ಲಿರುವ ನ್ಯೂನ್ಯತೆ ಸರಿಪಡಿಸದಿದ್ದಲ್ಲಿ ಶ್ರೀ ಸಾಮಾನ್ಯರಿಗೆ ತೊಂದರೆ ತಪ್ಪಿದ್ದಲ್ಲ ಎಂದರು. ಬಡಜನರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ನೇಮಕಾತಿಯಲ್ಲಿ ಪ್ರಮಾಣ ಪತ್ರದ ಅವಧಿ ಮುಗಿದಿದೆ ಎಂದು ಅರ್ಜಿ ತಿರಸ್ಕಾರ ಮಾಡುವುದು ಸರಿಯಲ್ಲ, ಸ್ಥಳೀಯದವರಾಗಿದ್ದರೆ ಮೆರಿಟ್ ಇರುವವರನ್ನು ಆಯ್ಕೆ ಮಾಡಬೇಕು ಎಂದರು.

ಹಾಸ್ಟೆಲ್‌ಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ಎಂದರಲ್ಲದೆ, ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿ ಮೂಲಭೂತ ಸೌಕರ್ಯ ಗಳನ್ನು ಒದಗಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರೈಲುಗಳಲ್ಲಿ ಡ್ರಗ್ಸ್ ಸಾಗಾಣಿಕೆ ಆಗುತ್ತಿದೆ ಇದನ್ನು ತಡೆಯಲು ಸ್ಪೆಷಲ್ ಡ್ರೆöÊವ್ ಮಾಡುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ರೈಲ್ವೆ ಇಲಾಖೆ ಅಧಿಕಾರಿಗಳು ಸೂಚಿಸಿದರು.

ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಿ ಸರಿಯಾಗಿ ಕಸ ವಿಲೇವಾರಿ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಡ್ರೈನೇಜ್ ಮತ್ತು ಕುಡಿಯುವ ನೀರಿನ ಪೈಪ್ ಲೈನ್ ಪರಿಶೀಲನೆ ಮಾಡಿ ಲಿಂಕ್ ಆಗಿಲ್ಲ ಎನ್ನುವುದಕ್ಕೆ ಅಫಿಡವಿಟ್ ಫೈಲ್ ಮಾಡಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಾರ್ಗಸೂಚಿ ಅನ್ವಯ ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ಅವರು ಮಾತನಾಡಿ ಹೊಂಬೆಳಕು ಯೋಜನೆಯಡಿ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಪಡಿತರ ಕಾರ್ಡ್ರದ್ದಾಗಿದ್ದರೆ ತಹಶೀಲ್ದಾರ್ ಸ್ಥಳ ತನಿಖೆ ಮಾಡಿ ವರದಿ ನೀಡಿದರೆ ಕ್ರಮವಹಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ನಾಮ ನಿರ್ದೇಶಿತ ಸದಸ್ಯರಾದ ತಾರಾ ಚಂದನ್, ಮಂಜುಳಾ ಬಾಯಿ, ಬಸವರಾಜು, ಹೆಚ್.ಪಿ ಮೋಹನ್, ಮಹೇಂದ್ರ, ಶಿವಕುಮಾರ್,ಶಶಿಕಲಾ, ತಾಹೀರ ಬೇಗಂ, ಶೃತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.


Post a Comment

0 Comments