ಮಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಶಾಸಕರ ಧರ್ಮಪತ್ನಿ ಪ್ರತಿಭಾ ಮಂಜುನಾಥ್ ಭೇಟಿ: ಜೀರ್ಣೋದ್ಧಾರ ಕಾರ್ಯಕ್ಕೆ ಬೆಂಬಲ

ಸಕಲೇಶಪುರ/ಆಲೂರು/ಕಟ್ಟಾಯ: ಕಟ್ಟಾಯ ಹೋಬಳಿ ಶಂಕರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಗೆವಾಳು ಗ್ರಾಮದಲ್ಲಿರುವ ಶ್ರೀ ಮಲ್ಲೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ಹಾಗೂ ಗೋಪುರ ಕಳಶ ಪ್ರತಿಷ್ಠಾಪನೆ ಪ್ರಯುಕ್ತ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ಅವರ ಧರ್ಮಪತ್ನಿ ಶ್ರೀಮತಿ ಪ್ರತಿಭಾ ಮಂಜುನಾಥ್ ಅವರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನಾಶೀರ್ವಾದ ಪಡೆದರು.


ಗ್ರಾಮಸ್ಥರು ಮತ್ತು ಮುಖಂಡರೊಂದಿಗೆ ದೇವಾಲಯದ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಕುರಿತು ಚರ್ಚಿಸಿದ ಪ್ರತಿಭಾ ಮಂಜುನಾಥ್ ಅವರು, ಈ ಪುಣ್ಯಕಾರ್ಯಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ದೇವಾಲಯದ ಪುನರ್ನಿರ್ಮಾಣ ಮತ್ತು ಕಳಶ ಪ್ರತಿಷ್ಠಾಪನೆಯು ಗ್ರಾಮಸ್ಥರ ಬಹುದಿನಗಳ ಕನಸಾಗಿದ್ದು, ಈ ಮೂಲಕ ಧಾರ್ಮಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಮತ್ತು ದೇವಾಲಯದ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಪ್ರತಿಭಾ ಮಂಜುನಾಥ್ ಅವರ ಭೇಟಿಯು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದ್ದು, ದೇವಾಲಯದ ಕಾರ್ಯಗಳು ಇನ್ನಷ್ಟು ವೇಗ ಪಡೆದುಕೊಳ್ಳುವ ನಿರೀಕ್ಷೆ ಮೂಡಿಸಿದೆ.

Post a Comment

0 Comments