ಹಾಸನ : ಜಿಲ್ಲೆಯಲ್ಲಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವುದರ ಜೊತೆಗೆ ಪುನರ್ವಸತಿ ಕಲ್ಪಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುವಂತೆ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಸರ್ವ ಸದಸ್ಯರ ವಿಶೇಷ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಕಾರ್ಯಾಚರಣೆ ಸಂದರ್ಭದಲ್ಲಿ ಕಂಡುಬAದ ಅಂಶಗಳನ್ನು ಗಮನಿಸಿ ಕಿಶೋರಾವಸ್ಥೆ ಕಾರ್ಮಿಕರ ಬಗ್ಗೆ ಕೂಡ ಎಚ್ಚರವಹಿಸಬೇಕು.ಅವರನ್ನು ಪತ್ತೆ ಹಚ್ಚುವುದರ ಜೊತೆಗೆ ಕೌಶಲ್ಯ ತರಬೇತಿ ನೀಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪತ್ತೆ ಹಚ್ಚಿದ ಬಾಲಕಾರ್ಮಿಕರಿಗೆ ಶಿಕ್ಷಣದ ಮಹತ್ವ ತಿಳಿಸಿ ವಿವಿಧ ಇಲಾಖೆಗಳಲ್ಲಿ ದೊರಕುವ ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಮನಪರಿವರ್ತನೆಗಾಗಿಮಾಹಿತಿ ಒದಗಿಸಲು ಕ್ರಮವಹಿಸುವಂತೆ ತಿಳಿಸಿದರು.
ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಬಾಲಕಾರ್ಮಿಕರನ್ನು ಪತ್ತೆ ಹಚ್ಚುವುದರ ಜೊತೆಗೆ ಅವರ ಪುನರ್ವಸತಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.ಏನೇನು ಸವಾಲುಗಳಿವೆ ಅವುಗಳ ಪರಿಹಾರಕ್ಕೆ ಏನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಕೂಡ ಗಮನಹರಿಸಿ ಎಂದು ತಿಳಿಸಿದರು.
ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಕಾರ್ಮಿಕ ಇಲಾಖೆಗೆ ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಹೊರ ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರ ಆಧಾರ್ ಕಾರ್ಡ್ಪರಿಶೀಲಿಸಿದಾಗ18 ಮೇಲ್ಪಟ್ಟವರು ಎಂದು ಪರಿಗಣಿಸಬಹುದಾಗಿದೆ ಆದರೆ ಅವರನ್ನು ವೈದ್ಯಕೀಯವಾಗಿ ಪರಿಶೀಲನೆಗೆ ಒಳಪಡಿಸಿದಾಗ 14 ವರ್ಷದೊಳಗಿನರಾಗಿರುತ್ತಾರೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಯಮುನಾ ಸಭೆಗೆ ಮಾಹಿತಿ ನೀಡಿದರು.
ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿದ ಸಂದರ್ಭದಲ್ಲಿ ಮಾಲೀಕರಿಗೆ 20 ಸಾವಿರ ರೂಗಳ ದಂಡ ವಸೂಲಿ ಮಾಡಲಾಗುವುದು ಈ ಹಣಕ್ಕೆ ಸರ್ಕಾರದಿಂದ 15 ಸಾವಿರ ರೂಪಾಯಿಗಳನ್ನು ಸೇರಿಸಿ ಒಟ್ಟು 35 ರೂಗಳನ್ನು ಮಕ್ಕಳ ಹೆಸರಿನಲ್ಲಿ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಲಾಗುವುದು ಎಂದು ತಿಳಿಸಿದರಲ್ಲದೆ,ಎಸ್.ಎಸ್.ಎಲ್.ಸಿ ಅನುತ್ತೀರ್ಣರಾದ ಮಕ್ಕಳಿಗೆ ಖಾಸಗಿಯಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು.
ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ|| ನಾಗಪ್ಪ ಅವರು ಮಾತನಾಡಿ ವಲಸೆ ಕಾರ್ಮಿಕರಲ್ಲಿ ಮಲೇರಿಯಾ ಪ್ರಕರಣಗಳು ಕಂಡು ಬರುತ್ತದೆ. ಕಾರ್ಮಿಕರ ಆರೋಗ್ಯದ ಸಮಸ್ಯೆ ಕುರಿತು ಗಮನಕ್ಕೆ ತಂದಲ್ಲಿ ಆರೋಗ್ಯ ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಲು ಸಹಕಾರಿ ಆಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಾಬು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಕುಮಾರ್ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.



0 Comments